ಲಕ್ಷ್ಮೇಶ್ವರ ಪಟ್ಟಣದಲ್ಲಿ ಹೃದಯಾಘಾತದಿಂದ ಮಹಿಳೆ ಸಾವು
ಗದಗ, 13 ಜುಲೈ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಅಕಾಲಿಕ ಹೃದಯಾಘಾತದಿಂದ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. 42 ವರ್ಷದ ಶೋಭಾ ವಡಕಣ್ಣವರ ಎಂಬವರು ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ರು. ವೈದ್ಯರು ತಕ್ಷಣ ತುರ್ತು ಚಿಕಿತ್ಸೆ ನೀಡಿದರೂ, ಸ
ಪೋಟೋ


ಗದಗ, 13 ಜುಲೈ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಅಕಾಲಿಕ ಹೃದಯಾಘಾತದಿಂದ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. 42 ವರ್ಷದ ಶೋಭಾ ವಡಕಣ್ಣವರ ಎಂಬವರು ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ರು. ವೈದ್ಯರು ತಕ್ಷಣ ತುರ್ತು ಚಿಕಿತ್ಸೆ ನೀಡಿದರೂ, ಸ್ಥಿತಿ ಗಂಭೀರವಾಗಿದ್ದ ಕಾರಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.

ಹುಬ್ಬಳ್ಳಿಯಲ್ಲಿ ನಿರಂತರ ಚಿಕಿತ್ಸೆ ನೀಡಲಾಯಿತಾದರೂ, ಮಹಿಳೆಯ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಶೋಭಾ ವಡಕಣ್ಣವರ ಅವರು ಕಳೆದ ಕೆಲವು ವರ್ಷಗಳಿಂದ ಉತ್ತಮ ಆರೋಗ್ಯ ಹೊಂದಿದ್ದರು ಎನ್ನಲಾಗಿದೆ. ಯಾವುದೇ ಹೃದಯ ಸಂಬಂಧಿತ ಕಾಯಿಲೆಗಳ ಲಕ್ಷಣಗಳು ಅವರಲ್ಲಿ ಈ ಹಿಂದೆಯೇ ಕಾಣಿಸಿಕೊಂಡಿರಲಿಲ್ಲ ಎಂಬುದೂ ಕುಟುಂಬಸ್ಥರು ತಿಳಿಸಿದ್ದಾರೆ.

ಈ ಘಟನೆಯಿಂದ ಲಕ್ಷ್ಮೇಶ್ವರ ಪಟ್ಟಣದ ನಿವಾಸಿಗಳಲ್ಲಿ ಆಘಾತ ಮನೆ ಮಾಡಿದೆ.

ಇದೊಂದು ಎಚ್ಚರಿಕೆಯಾಗಬೇಕಾದ ಘಟನೆ. ತ್ವರಿತ ಎದೆನೋವು, ಉಸಿರಾಟದಲ್ಲಿ ತೊಂದರೆ, ತೀವ್ರ ದಣಿವು ಮುಂತಾದ ಲಕ್ಷಣಗಳು ಕಂಡುಬಂದಾಗ ತಕ್ಷಣ ವೈದ್ಯರ ಸಲಹೆ ಪಡೆಯುವುದು ಅತ್ಯಗತ್ಯವಾಗಿದೆ ಎಂಬುದು ವೈದ್ಯರ ಸಲಹೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande