ಬೆಂಗಳೂರು, 14 ಜುಲೈ (ಹಿ.ಸ.) :
ಆ್ಯಂಕರ್ : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಾಳೆ ಮತ್ತು ನಾಳಿದ್ದು ಬೆಂಗಳೂರಿನಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯಗಳ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜೊತೆಗೆ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು, ಸಂಸದರು ಪಾಲ್ಗೊಳ್ಳಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಾಳೆ ಸಂಜೆ 5 ಗಂಟೆಗೆ ಹಾಗೂ ಹೋಟೆಲ್ ಶಾಂಗ್ರಿಲಾದಲ್ಲಿ ನಾಡಿದ್ದು ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa