ಸೈನಿಕ ಕಲ್ಯಾಣ ಇಲಾಖೆಯಿಂದ ಶಿಷ್ಯವೇತನ, ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ, 14 ಜುಲೈ (ಹಿ.ಸ.) : ಆ್ಯಂಕರ್ : ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2025-26ನೇ ಸಾಲಿಗಾಗಿ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಹಾಗೂ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಪದವಿ, ಡಿಪ್ಲೊಮಾವರೆಗೆ ಕರ್ನಾಟಕದಲ್ಲಿರುವ ಹಾಗ
ಸೈನಿಕ ಕಲ್ಯಾಣ ಇಲಾಖೆಯಿಂದ ಶಿಷ್ಯವೇತನ, ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ


ಕೊಪ್ಪಳ, 14 ಜುಲೈ (ಹಿ.ಸ.) :

ಆ್ಯಂಕರ್ : ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2025-26ನೇ ಸಾಲಿಗಾಗಿ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಹಾಗೂ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಂದನೇ ತರಗತಿಯಿಂದ ಪದವಿ, ಡಿಪ್ಲೊಮಾವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಸಹ ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಪುಸ್ತಕ ಧನ ಸಹಾಯ ಮತ್ತು ಡಿಗ್ರಿ ಡಿಪ್ಲೊಮಾ, ಜೆಒಸಿ ಅಥವಾ ಪ್ರೊಫೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳ ವಿಶೇಷ ನಿಧಿಯಿಂದ ಶಿಷ್ಯವೇತನ ನೀಡಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು.

2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳು ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ನಿಗದಿತ ನಮೂನೆಯ ಅರ್ಜಿ ಫಾರಂಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಸೆಕ್ಟರ್ ನಂಬರ್ 22, ಪೊಲೀಸ್ ಪ್ಯಾಲೆಸ್ ಹತ್ತಿರ, ನವನಗರ, ಬಾಗಲಕೋಟೆ ಇವರ ಕಾರ್ಯಾಲಯದಿಂದ ಶುಲ್ಕ ರಹಿತವಾಗಿ ಪಡೆಯಬಹುದು.

ಶಿಷ್ಯವೇತನಕ್ಕಾಗಿ ಅರ್ಜಿಯೊಂದಿಗೆ ಸಲ್ಲಿಸುವ ಮಾಜಿ ಸೈನಿಕರ ಅಥವಾ ಅವಲಂಬಿತರ ಮೊಬೈಲ್ ಸಂಖ್ಯೆಯು ಮಕ್ಕಳ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08354-235434 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande