ಬಳ್ಳಾರಿ, 14 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನಗರದ ಕಪ್ಪಗಲ್ಲು ರಸ್ತೆಗೆ ಮಾಜಿ ಮಂತ್ರಿಗಳಾದ `ಶ್ರೀ ಮುಂಡ್ಲೂರು ರಾಮಪ್ಪ ರಸ್ತೆ’ ಎಂದು ಮತ್ತು ಅನಂತಪುರ ರಸ್ತೆಯಲ್ಲಿರುವ ಸರ್ಕಾರಿ ಅತಿಥಿ ಗೃಹದ ಮುಂಭಾಗ ವೃತ್ತಕ್ಕೆ `ಶ್ರೀಕೃಷ್ಣ’ ವೃತ್ತ ಎಂದು ಹೆಸರು ನಾಮಕರಣ ಮಾಡಲು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬಹುದಾಗಿದೆ.
ನಿಗಧಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದಲ್ಲಿ ಸರ್ಕಾರದ ಸುತ್ತೋಲೆಯ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್