ಗದಗ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ಸಂಭ್ರಮೋತ್ಸವ
ಗದಗ, 14 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಹೆಚ್ಚು ಜನಪ್ರಿಯ ಯೋಜನೆ ಶಕ್ತಿ ಯೋಜನೆಯಾಗಿದೆ ಎಂದು‌ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ‌ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೋಂದಾದ ಶ
ಪೋಟೋ


ಗದಗ, 14 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಹೆಚ್ಚು ಜನಪ್ರಿಯ ಯೋಜನೆ ಶಕ್ತಿ ಯೋಜನೆಯಾಗಿದೆ ಎಂದು‌ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ‌ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೋಂದಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ ಸಂಭ್ರಮದ ಹಿನ್ನೆಯಲ್ಲಿ‌ ಗದಗ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಗೆ ಪೂಜೆ ಮಾಡಿ, ಸಿಹಿ ವಿತರಣೆ ಮಾಡಿ ಮಾತನಾಡಿದರು.

ರಾಜ್ಯದಾದ್ಯಂತ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ರಾಜ್ಯದ ವಿವಿಧೆಡೆ ಆಯೋಜನೆ ಮಾಡಲಾಗಿದೆ. ಈ ಯೋಜನೆ ಯಶಸ್ವಿಯಾಗಲು ಸರ್ಕಾರದ ಜೊತೆಗೆ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕಾರ್ಯ ಪ್ರಮುಖವಾಗಿದೆ ಎಂದರು.

ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಸ್ವತಂತ್ರವಾಗಿ ರಾಜ್ಯದ ಎಲ್ಲಡೆ ಉಚಿತ ಪ್ರಯಾಣಿಸಲು ಅನುಕೂಲವಾಗಿದೆ. ದೇಶ ಸುತ್ತು , ಕೋಶ ಓದು ಎಂಬ ಹಿನ್ನಲೆಯಲ್ಲಿ ಮಹಿಳೆಯರು ರಾಜ್ಯ ಸುತ್ತಿ ನಮ್ಮ ಐತಿಹಾಸಿಕ ಪರಂಪರೆ, ಇತಿಹಾಸ, ಸಂಸ್ಕ್ರತಿ ನೋಡಿ ತಿಳಿದುಕೊಂಡಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ, ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಕೆ ಪಾಟೀಲ ಅವರ ಇಚ್ಚಾಶಕ್ತಿ ಕಾರ್ಯವೈಖರಿಯಿಂದ ಮತ್ತು ಸಹಕಾರದಿಂದ ಯಶ್ವಸಿಯಾಗಿದೆ ಎಂದರು.

ಗದಗ ಜಿಲ್ಲೆಯಲ್ಲಿ 10.98 ಲಕ್ಷ ಮಹಿಳೆಯರು ಪ್ರಯಾಣಿಸುವ ಮೂಲಕ 358.89 ಕೋಟಿ ಆದಾಯವಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಬಿ ಬಿ ಅಸೂಟಿ ಹೇಳಿದರು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಪೀರ್ ಸಾಬ್ ಕೌತಾಳ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಕೃಷ್ಣಗೌಡ ಎಚ್ ಪಾಟೀಲ, ಅಶೋಕ ಮಂದಾಲಿ ಸೇರಿದಂತೆ ಸಮಿತಿಯ ಎಲ್ಲ ಸದಸ್ಯರುಗಳು ನೆರೆದ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ವಾಯು ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ ದೇವರಾಜ, ವಿಭಾಗೀಯ ಸಂಚಲನಾಧಿಕಾರಿ ಪಿ ವೈ ಮೇತ್ರಿ, ಡಿಪೋ ಮ್ಯಾನೇಜರ ಬಿ ಎಲ್ ಗೆಣ್ಣೂರ, ಕಂಟ್ರೋಲರಳಾದ ವೆಂಕಟೇಶ್ ಜಾದವ, ಶಿವಾನಂದ ಸಂಗಣ್ಣನವರ, ಎಂಬಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande