ಕೊಪ್ಪಳ, 14 ಜುಲೈ (ಹಿ.ಸ.) :
ಆ್ಯಂಕರ್ : ಯಲಬುರ್ಗಾದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾಗಿ ಕಾನೂನುಗಳು ವಿಶೇಷವಾಗಿ ಬಾಲ್ಯ ವಿವಾಹ ನಿμÉೀಧ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿμÉೀಧ ಕಾಯ್ದೆ 2006, ತಿದ್ದುಪಡಿ-2016, ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012ರ ಕುರಿತು, ಸುರಕ್ಷಿತ ಸ್ಪರ್ಶ-ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ 2016ರ ಅಂಶಗಳ ಅನುμÁ್ಠನದ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್‍ರೀಚ್ ವರ್ಕರ್ ಪ್ರತಿಭಾ ಕಾಶಿಮಠ ಅವರು ಸಂಪೂರ್ಣ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯವೈಖರಿ, ಮಕ್ಕಳ ಸಹಾಯವಾಣಿ-1098 ಮತ್ತು ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕ ರವಿ ಬಡಿಗೇರ್ ಅವರು ಮಕ್ಕಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಮಯ್ಯ ಅವರು ಬಾಲ್ಯ ವಿವಾಹ ನಿμÉೀಧ ಕಾಯ್ದೆ-2006, ತಿದ್ದುಪಡಿ-2016 ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ಕಾಲೇಜಿನ ಅಧ್ಯಾಪಕಿ ಲಕ್ಷ್ಮೀ ಅವರು ನಿರ್ವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್