ಹುಬ್ಬಳ್ಳಿ, 14 ಜುಲೈ (ಹಿ.ಸ.) :
ಆ್ಯಂಕರ್ : ಬಿಆರ್‌ಟಿಎಸ್ (ತ್ವರಿತ ಬಸ್ ಸಾರಿಗೆ ವ್ಯವಸ್ಥೆ) ಬದಲಿಗೆ ಇಆರ್‌ಟಿ ಸಾರಿಗೆ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅದರ ಸಾಧಕ ಬಾಧಕಗಳ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ನೀಡುವುದು ಸರ್ಕಾರದ ಮೂಲ ಧ್ಯೇಯವಾಗಿದೆ. ಮುಂದಿನ ಒಂದು ತಿಂಗಳಲ್ಲಿ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa