ಶಕ್ತಿ ಯೋಜನೆ ಯಶಸ್ವಿ: ಸಚಿವ ಸಂತೋಷ ಲಾಡ್
ಹುಬ್ಬಳ್ಳಿ, 14 ಜುಲೈ (ಹಿ.ಸ.) : ಆ್ಯಂಕರ್ : ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ 500 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಶಕ್ತಿ ಯೋಜನೆಯ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದರು. ಹುಬ್ಬಳ್ಳಿ ಹೊಸೂರು ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರ
Lad


ಹುಬ್ಬಳ್ಳಿ, 14 ಜುಲೈ (ಹಿ.ಸ.) :

ಆ್ಯಂಕರ್ : ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ 500 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಶಕ್ತಿ ಯೋಜನೆಯ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದರು.

ಹುಬ್ಬಳ್ಳಿ ಹೊಸೂರು ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, “ಈ ಯೋಜನೆಯಿಂದ ರಾಜ್ಯಕ್ಕೆ ಸುಮಾರು ₹12,000 ಕೋಟಿ ವೆಚ್ಚವಾಗಿದೆ. ಮಹಿಳಾ ಉದ್ಯೋಗಗಳಲ್ಲಿ ಶೇ.45ರಷ್ಟು ಹೆಚ್ಚಳವಾಗಿದೆ,” ಎಂದು ತಿಳಿಸಿದರು.

ವಾಯುವ್ಯ ಸಾರಿಗೆ ಸಂಸ್ಥೆಯ ಪ್ರಿಯಾಂಗಾ ಎಂ. ಅವರು, “ಪ್ರತಿದಿನ 16 ಲಕ್ಷ ಮಹಿಳೆಯರು ಶಕ್ತಿ ಯೋಜನೆಯಿಂದ ಪ್ರಯಾಣಿಸುತ್ತಿದ್ದಾರೆ,” ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿ, ಸಾರಿಗೆ ಸಿಬ್ಬಂದಿಯನ್ನು ಸನ್ಮಾನಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande