ಮೃತ ರೈತರ ಕುಟುಂಬಗಳಿಗೆ ಪರಿಹಾರ ವಿತರಣೆ :ಸಚಿವ ಸಂತೋಷ ಲಾಡ್
ಹುಬ್ಬಳ್ಳಿ, 14 ಜುಲೈ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ
Visit


ಹುಬ್ಬಳ್ಳಿ, 14 ಜುಲೈ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

ಭರದ್ವಾಡ ಗ್ರಾಮಕ್ಕೆ ಭೇಟಿ ನೀಡಿ, ಇತ್ತೀಚೆಗೆ ಮೃತರಾದ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಭರದ್ವಾಡ ಗ್ರಾಮದ ರೈತರಾದ ರವಿರಾಜ ಬಸವರಾಜ ಜಾಡರ ಹಾಗೂ ಬಸನಗೌಡ ಶಿವನಗೌಡ ಪಾಟೀಲ ಅವರ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ಸರ್ಕಾರದ ವತಿಯಿಂದ ಅವರ ಕುಟುಂಬಸ್ಥರಿಗೆ ಮನೆ, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ರವಿರಾಜ ಜಾಡರ ಅವರ ಕೆನರಾ ಬ್ಯಾಂಕ್ ಸಾಲವನ್ನು ನಮ್ಮ ಫೌಂಡೇಶನ್ ವತಿಯಿಂದ ಭರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande