ಬಳ್ಳಾರಿ, 14 ಜುಲೈ (ಹಿ.ಸ.) :
ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆ.ಎ.ಎಸ್ ಅಧಿಕಾರಿ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್