ಹೊಸಪೇಟೆ, 15 ಜುಲೈ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತ ಇಲಾಖೆಯಡಿ ಕಾರ್ಯನಿರ್ವಹಿಸುವ ಮರಿಯಮ್ಮನಹಳ್ಳಿ ಮತ್ತು ಕಮಲಾಪುರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಬಾಕಿ ಉಳಿದ 6ನೇ ತರಗತಿ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಖುದ್ದು ವಸತಿ ಶಾಲೆಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮಲಾಪುರ ಮೊ.6366705213, ಮರಿಯಮ್ಮನಹಳ್ಳಿ ಮೊ.9535774399 ಸಂಖ್ಯೆಗೆ ಕರೆ ಮಾಡಬಹುದು ಎಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್