ವಿಜಯಪುರ, 15 ಜುಲೈ (ಹಿ.ಸ.) :
ಆ್ಯಂಕರ್ : ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹಳೆ ಶಿಷ್ಯ ಸುಶೀಲ ಕಾಳೆ ಮೇಲೆ ನಿನ್ನೆ ಹಾಡು ಹಗಲೆ ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಇಬ್ಬರು ಆರೋಪಿಗಳು ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ವಿಜಯಪುರ ನಗರದ ಹೊರವಲಯದ ಇಟ್ಟಂಗಿಹಾಳ ಗ್ರಾಮದ ಬಳಿ ಪರಾರಿ ಆಗುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿದೆ. ಬೈಕ್‌ನಲ್ಲಿ ಪರಾರಿ ಆಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು ಹಿಡಿಯಲು ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿ ಆಕಾಶ ಕಲ್ಲವ್ವಗೋಳ, ಸುಭಾಷ ಬಗಲಿ ಕಾಲಿಗೆ ತಲಾ ಒಂದೊಂದು ಗುಂಡು ಬಿದ್ದಿವೆ.
ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಆಗ ಆತ್ಮರಕ್ಷಣೆಗಾಗಿ ಗಾಂಧಿ ಚೌಕ ಸಿಪಿಐ ಪ್ರದೀಪ್ ತಳಕೇರಿ ಆರೋಪಿಗಳ ಕಾಲಿಗೆ ಗುಂಡು ಮಾಡಿದ್ದಾರೆ.
ಸಿಪಿಐ ತಳಕೇರಿ ಒಟ್ಟು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಸದ್ಯ ನಾಲ್ಕು ಆರೋಪಿಗಳು ಪರಾರಿಯಾಗಿದ್ದು, ಸೆರೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande