ಕೋಲಾರ, ೧೫ ಜುಲೈ (ಹಿ ಸ) :
ಆ್ಯಂಕರ್ : ಕೋಲಾರ ತಾಲೂಕಿನ ನರಸಾಪುರ ಹಾಗೂ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಳೀಯ ಯುವಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ನೀಡಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳಾ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಿಯಾಜ್ ಗೋರು ಕೋಲಾರ ಜಿಲ್ಲೆಯಲ್ಲಿ ಹೆಚ್ಚು ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ ಯುವಕರು, ಯುವತಿಯರು ವಿದ್ಯಾಭ್ಯಾಸ ಮುಗಿಸಿದ ಬಳಿಕ ಬೆಂಗಳೂರಿಗೆ ಉದ್ಯೋಗಕ್ಕಾಗಿ ಹೋಗುತ್ತಿದ್ದಾರೆ ಈ ಭಾಗದಲ್ಲಿ ಹೆಚ್ಚು ಕೈಗಾರಿಕೆಗಳು ಇದ್ದು ಸ್ಥಳೀಯವಾಗಿರುವ ಯುವ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಹ ಸ್ಥಳೀಯರಿಗೆ ಶೇಕಡಾ ೭೦% ಉದ್ಯೋಗ ನೀಡಬೇಕು ಎಂದು ಹೇಳಿದ್ದರು ಸಹ ಕಂಪನಿಗಳು ಅದನ್ನು ಸರಿಯಾದ ರೀತಿಯಲ್ಲಿ ಪಾಲಿಸುತ್ತಿಲ್ಲ. ಕಾರ್ಮಿಕ ಕಾಯ್ದೆಯನ್ನು ಸರಿಯಾದ ರೀತಿಯಲ್ಲಿ ಎಲ್ಲಾ ಕಂಪನಿಗಳು ಪಾಲಿಸಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿದೆ. ಅದೇ ರೀತಿಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ರವರಿಗೂ ಮನವಿ ನೀಡಿ ಸ್ಥಳೀಯ ಯುವಕರಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಕೋಲಾರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುಹೈಲ್, ನಗರ ಅಧ್ಯಕ್ಷ ಅರ್ಬಾಜ್, ಪ್ರಶಾಂತ್, ಷಮ್ಮು, ತೌಸೀಫ್, ಇಬ್ರಾಹಿಂ, ಗುಲಾಮ್ ಉಪಸ್ಥಿತರಿದ್ದರು.
ಚಿತ್ರ :ಕೋಲಾರ ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಕ್ಕೆ ಒತ್ತಾಯಿಸಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳಾ ಅವರಿಗೆ ಮನವಿ ಸಲ್ಲಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್