ವಿಜಯಪುರ, 17 ಜುಲೈ (ಹಿ.ಸ.) :
ಆ್ಯಂಕರ್ : ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಸುಶೀಲ ಕಾಳೆ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ನಗರದ ಎಸ್ ಎಸ್ ಕಾಂಪ್ಲೆಕ್ಸ್‌ನಲ್ಲಿ ಜುಲೈ 14ರಂದು ಆರೋಪಿಗಳು ಹತ್ಯೆಗೈದು ಪರಾರಿಯಾಗಿದ್ದರು. ಮೊನ್ನೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ನೀಡಿ ಪೊಲೀಸರು ಬಂಧಿಸಿ ದ್ದರು.
ಇದೀಗ್ ಗೌತಮ ಆಲಮೇಲಕರ, ನಾರಾಯಣ ಜಾಧವ್, ಬಸವರಾಜ್ ಮುನ್ನಾಳ, ಪ್ರಜ್ವಲ ಹಳಿಮನಿ ಬಂಧಿತರು.
ಮೊನ್ನೆ ಆಕಾಶ ಕಲ್ಲವ್ವಗೋಳ ಹಾಗೂ ಸುದೀಪ ಬಗಲಿ ಬಂಧಿಸಲಾಗಿತ್ತು. ಇದರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದವರು. ಬಂಧಿತರಿಂದ ಒಂದು ನಾಡ ಪಿಸ್ತೂಲ್, ನಾಲ್ಕು ಜೀವಂತ ಗುಂಡುಗಳು, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande