ನವದೆಹಲಿ, 17 ಜುಲೈ (ಹಿ.ಸ.) :
ಆ್ಯಂಕರ್ : ಬಿಡದಿ ಬಳಿಯ ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸ್ತುತ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ್ದ ನ್ಯಾಯಾಂಗ ನಿಂದನೆ ಸಂಬಂಧದ ಪ್ರಕರಣಕ್ಕೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ
ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರಿದ್ದ ದ್ವಿಸದಸ್ಯ ಪೀಠ, ಕುಮಾರಸ್ವಾಮಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ, ಮುಂದಿನ ಆದೇಶದವರೆಗೂ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa