ಬೆಂಗಳೂರು, 18 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ನೀಡಲಾಗಿದೆ. ಜುಲೈ 24ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದ್ದು,
ಉಳಿದ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa