ಕೆಲಸದಲ್ಲಿ ಅಧಿಕಾರಿಗಳ ವಿಳಂಬ ಧೋರಣೆ ಸಲ್ಲ : ಜಿಲ್ಲಾಧಿಕಾರಿ ಲತಾ ಕುಮಾರಿ
ಹಾಸನ, 18 ಜುಲೈ (ಹಿ.ಸ.) : ಆ್ಯಂಕರ್ : ಹಾಸನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಸ್.ಎಫ್.ಸಿ ಮತ್ತು 15ನೇ ಹಣಕಾಸಿನಲ್ಲಿ ಬಂದಿರುವ ಹಣವನ್ನು ಪೂರ್ಣಪ್ರಮಾಣದಲ್ಲಿ ವೆಚ್ಚ ಮಾಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಗ
Meeting


ಹಾಸನ, 18 ಜುಲೈ (ಹಿ.ಸ.) :

ಆ್ಯಂಕರ್ : ಹಾಸನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಸ್.ಎಫ್.ಸಿ ಮತ್ತು 15ನೇ ಹಣಕಾಸಿನಲ್ಲಿ ಬಂದಿರುವ ಹಣವನ್ನು ಪೂರ್ಣಪ್ರಮಾಣದಲ್ಲಿ ವೆಚ್ಚ ಮಾಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಗರ ಸ್ಥಳೀಯ ಸಂಸ್ಥೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೆಲಸ ಮಾಡುವುದನ್ನು ವಿಳಂಬ ಮಾಡಬಾರದು ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದರು.

ಐತಿಹಾಸಿಕ ಪ್ರವಾಸಿ ಸ್ಥಳವಾದ ಬೇಲೂರಿನಲ್ಲಿ ದೇವಾಲಯದ ಸುತ್ತ ಮುತ್ತ ಹಾಗೂ ಪುರಸಭೆ ವ್ಯಾಪ್ತಿಯ ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿವಾರ ಕೆಲಸವಾರು ಪ್ರಗತಿಯನ್ನು ಪರಿಶೀಲನೆ ಮಾಡುವಂತೆ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರಲ್ಲದೆ, ಕೆಲಸ ಮಾಡಲು ಉದಾಸೀನ ಮಾಡದಂತೆ ಸೂಚಿಸಿದರು.

ನಮ್ಮ ಕ್ಲಿನಿಕ್‌ಗೆ ಸಂಬಂಧಿಸಿದಂತೆ ಖರೀದಿಸುವ ವಸ್ತುಗಳ ಬಗ್ಗೆ ಸ್ಪೆಸಿಫಿಕೇಷನ್ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಪತ್ರ ಬರೆಯಲು ಸೂಚಿಸಿದರು.

ನಗರೋತ್ಥಾನ ಹಂತ 4 ಕ್ಕೆ ಸಂಬಂಧಿಸಿದಂತೆ ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ವಿಂಗಡಣೆ ಮಾಡಿ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜನರಿಗೆ ಒಳ್ಳೆಯ ಕೆಲಸ ಮಾಡುವ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಕೆಲಸ ಮಾಡಲು ಗಮನಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಲು ಕ್ರಮವಹಿಸಿ, ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪ್‌ಗಳು ಹಾದು ಹೋಗದಂತೆ ನಿಗಾವಹಿಸುವುದರ ಜೊತೆಗೆ ನೀರು ಕಲುಷಿತವಾಗದಂತೆ ಎಚ್ಚರವಹಿಸಿ ಎಂದು ತಿಳಿಸಿದರು.

ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ನಿಗಾ ವಹಿಸಬೇಕು ಖಾಸಾಯಿ ಖಾನೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿ, ರಸ್ತೆಗಳ ಗುಂಡಿ ಮುಚ್ಚಿಸಲು ಕಡ್ಡಾಯವಾಗಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಗೆ ಇ-ಖಾತೆ ಮಾಡಿಕೊಡಲು ವಿಳಂಬ ಮಾಡದಂತೆ ನಿಗಾವಹಿಸಿ ಎಂದರಲ್ಲದೆ, ಆಸ್ತಿ ಸಂರಕ್ಷಣೆಗೆ, ನಾಯಿಗಳ ಸಂತಾನ ನಿಯಂತ್ರಣಕ್ಕೆ, ಹಾಗೂ ಆಹಾರ ಸುರಕ್ಷತೆಗೆ ಎಚ್ಚರವಹಿಸಿ ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ತ್ಯಾಗರಾಜ್ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande