ಕೋಲಾರ, ೧೮ ಜುಲೈ (ಹಿ.ಸ) :
ಆ್ಯಂಕರ್ : ಕೋಲಾರ ತಾಲೂಕಿನ ಸುಳದೇನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಕೊಡಲು ಪೈಪ್ ಲೈನ್ ಕೆಲಸ ಪ್ರಾರಂಭಿಸಲಾಗುತ್ತದೆ. ಜೊತೆಗೆ ಶುದ್ದ ನೀರಿನ ಘಟಕ, ಹೈಮಾಸ್ಕ್ ಲೈಟ್ ಅಳವಡಿಸಲಾಗುತ್ತದೆ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಬದ್ದವಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಸುಳದೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶುದ್ದ ನೀರಿನ ಘಟಕ, ಹೈಮಾಸ್ಕ್ ಲೈಟ್ ಮತ್ತು ಚಂದ್ರಶೇಖರಪುರ ಗ್ರಾಮದಲ್ಲಿ ಶುದ್ದ ನೀರಿನ ಘಟಕ ಗುದ್ದಲಿ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ರಾಮಗಳ ಅಭಿವೃದ್ಧಿಯೇ ಕಾಂಗ್ರೆಸ್ ಸರಕಾರದ ಮುಖ್ಯ ಉದ್ದೇಶವಾಗಿದೆ. ನಿಮ್ಮ ಗ್ರಾಮಕ್ಕೆ ಅವಶ್ಯಕತೆ ಇರುವುದರ ಬಗ್ಗೆ ಗಮನಕ್ಕೆ ತನ್ನಿ ಅಭಿವೃದ್ಧಿ ಮಾಡತ್ತೇವೆ ಸುಮಾರು ೩.೫೦ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸಹ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಉರಟಿ ಅಗ್ರಹಾರ ಚೌಡರೆಡ್ಡಿ, ಸೀಸಂದ್ರ ಗೋಪಾಲಗೌಡ, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಮುನಿಯಪ್ಪ, ಗ್ರಾಪಂ ಸದಸ್ಯರಾದ ಕಡಗಟ್ಟೂರು ದೇವರಾಜ್, ಹರೀಶ್, ಮೇಡಿಹಾಳ ಮುನಿಆಂಜಿನಪ್ಪ, ತಿಪ್ಪೇನಹಳ್ಳಿ ನಾಗೇಶ್, ಮೆಡಿಕಲ್ ಮುನಿರಾಜು, ಕುರುಗಲ್ ರಮೇಶ್, ಅಟ್ರಾಸಿಟಿ ಕಮಿಟಿ ಸದಸ್ಯ ಬೈರಂಡಹಳ್ಳಿ ನಾಗೇಶ್, ವೇಮಗಲ್ ಕೌಶಿಕ್, ಮುಂತಾದವರು ಇದ್ದರು.
ಚಿತ್ರ ; ಕೋಲಾರ ತಾಲ್ಲೂಕಿನ ಸುಳದೇನಹಳ್ಳಿ ಗ್ರಾಮದಲ್ಲಿ ಶುದ್ದ ನೀರಿನ ಘಟಕಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಗುದ್ದಲಿ ಪೂಜೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್