ಕೋಲಾರ, ೧೮ ಜುಲೈ (ಹಿ.ಸ) :
ಆ್ಯಂಕರ್ : ನಗರದ ಕೋಲಾರಮ್ಮ ದೇವರ ಜನ್ಮ ದಿನೋತ್ಸವ ಹಿನ್ನೆಲೆಯಲ್ಲಿ ಕೋಲಾರ ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ವತಿಯಿಂದ ಅನ್ನ ಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು,
ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಅಭಿ ನಾಯ್ಡು ಮಾತನಾಡಿ ಕೋಲಾರಮ್ಮ ತಾಯಿಯ ಜನ್ಮದಿನ ತುಂಬಾ ವಿಜೃಂಭಣೆಯಿAದ ಆಚರಣೆ ಮಾಡಲಾಗುತ್ತಿದ್ದು ಬಿಜೆಪಿ ಯುವ ಮೋರ್ಚಾ ವತಿಯಿಂದ ಕೋಲಾರಮ್ಮ ದೇವಾಲಯದ ಮುಂಭಾಗದಲ್ಲಿ ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಗಿದ್ದು, ತುಂಬಾ ಯಶಸ್ವಿಯಾಗಿ ನಡೆಯಿತು. ಪ್ರತಿ ವರ್ಷ ಇದೇ ತರ ಕಾರ್ಯಕ್ರಮ ಮಾಡುತ್ತೇವೆ ಎಂದರು,
ಕೋಲಾರ ಬರ ಪಿಡೀತ ಪ್ರದೇಶವಾಗಿದ್ದು ಮಳೆ ಬೆಳೆ ಚೆನ್ನಾಗಿ ಆಗಬೇಕು ಎಂದು ಕೋಲಾರಮ್ಮ ತಾಯಿಯಲ್ಲಿ ಪ್ರಾರ್ಥನೆ ಮಾಡಿದ್ದೇವೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾರ್ಗದರ್ಶನದಲ್ಲಿ ಎಲ್ಲಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಯುವ ಮೋರ್ಚಾ ವತಿಯಿಂದ ಮುಂದಿನ ವರ್ಷ ಸುಮಾರು ೧೦ ಸಾವಿರ ಜನರಿಗೆ ಅನ್ನ ಸಂತರ್ಪಣೆ ಮಾಡುತ್ತೇವೆ, ನಾವೆಲ್ಲರೂ ಬದ್ದವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ರಾಕೇಶ್, ಶರತ್, ಹಾಗೂ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ನಗರದ ಕೋಲಾರಮ್ಮ ಜನ್ಮದಿನೋತ್ಸವದ ಅಂಗವಾಗಿ ಯುವ ಮೋರ್ಚಾದಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್