ಕೋಲಾರ, ಜುಲೈ ೧೮ (ಹಿ.ಸ) :
ಆ್ಯಂಕರ್ : ವಿದ್ಯಾರ್ಥಿ ದಿಸೆಯಲ್ಲಿ ಜೀವನಾವಶ್ಯಕ ಕಾನೂನುಗಳ ಬಗ್ಗೆ ಅರಿವು ಮೂಡಿಸಿದರೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ ಆರ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೋಲಾರ ಸರ್ಕಾರಿ ಪ್ರೌಢ ಶಾಲೆ, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ದಾಖಲಾತಿ ಆಂದೋಲನ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ರೂಪಿಸಿರುವ ಕಾನೂನನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ. ಇತ್ತೀಚಿಗೆ ಮಕ್ಕಳು ತಮ್ಮ ತಂದೆ ತಾಯಿಯವರಿಗೆ ಗೌರವ ನೀಡುವುದು ಕಡಿಮೆ ಆಗಿದೆ ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಯುವುದು ಬಹಳ ಅವಶ್ಯ. ಶಿಕ್ಷಣದೊಂದಿಗೆ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಕಲಿಸಿದರೆ ಮಕ್ಕಳ ಬದುಕು ಉಜ್ವಲವಾಗುತ್ತದೆ ಎಂದು ತಿಳಿಸಿದರು.
ಜೀವನದಲ್ಲಿ ಧ್ಯಾನ ಮಾಡುವುದರಿಂದ ಮಕ್ಕಳಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಮಕ್ಕಳು ಮನೆಯಲ್ಲಿ ತಂದೆ ತಾಯಿಗಳಿಗೆ ಮತ್ತು ಶಾಲೆಯಲ್ಲಿ ಶಿಕ್ಷಕರಿಗೆ ಗೌರವವನ್ನು ಕೊಡಬೇಕು, ಇತ್ತೀಚಿಗೆ ಮಕ್ಕಳು ಮೊಬೈಲ್ ವ್ಯಸನಗಳಾಗಿದ್ದರೆ ಸದರಿ ಮೊಬೈಲ್ ವ್ಯಸನದಿಂದ ಮಕ್ಕಳನ್ನು ಮುಕ್ತಿ ಮಾಡಲು ಪುರ್ನವಸತಿ ಕೇಂದ್ರಗಳನ್ನು ತೆರೆಯಬೇಕಾಗಿರುತ್ತದೆ. ಪಾಲಕರು * ಮಕ್ಕಳಿಗೆ ಮೊಬೈಲ್ ನೀಡಬಾರದು. ಮಕ್ಕಳ ಶಿಕ್ಷಣ ಹಕ್ಕು, ಬಾಲಕಾರ್ಮಿಕ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಹಾಗೂ ಮೊಟಾರ್ ವಾಹನ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ಅಷ್ಟೇ ಅಲ್ಲದೇ ಇತ್ತೀಚಿಗೆ ಮಕ್ಕಳು ತಂಬಾಕು ಉತ್ಪನ್ನ ಮತ್ತು ಮಾಧಕ ವಸ್ತುಗಳಿಗೆ ವ್ಯಸನಿಗಳಾಗುತ್ತಿದ್ದಾರೆ, ಆದರಿಂದ ಮಕ್ಕಳು ಶಿಕ್ಷಣ ಕುಂಟಿತವಾಗಿ ಅವರ ಜೀವನ ಹಾಳಾಗುತ್ತಿದೆ. ಅಷ್ಟೇ ಅಲ್ಲದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರೆ ಎಂದು ಸದಸ್ಯ ಕಾರ್ಯದರ್ಶಿಗಳು ತಿಳಿಸಿದರು.
ಇತ್ತೀಚಿಗೆ ಎಲ್ಲ ಕಡೆ ಬಾಲ್ಯ ವಿವಾಹ ಮಾಡುವುದು ಹೆಚ್ಚಾಗುತ್ತದೆ ಅದು ಸಹ ಮಕ್ಕಳ ಶಿಕ್ಷಣ ಹಕ್ಕಿನ ಉಲ್ಲಂಘನೆ ಆಗುತ್ತದೆ ೧೮ ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹಾಗೂ ೨೧ ವರ್ಷ ಒಳಗಿನ ಗಂಡು ಮಕ್ಕಳಿಗೆ ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅಡಿಯಲ್ಲಿ ೨ ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಇತ್ತೀಚಿಗೆ ಮಕ್ಕಳು ಮೊಟರ್ ವಾಹನಗಳನ್ನು ಚಾಲನೆ ಮಾಡುತ್ತಾರೆ. ಆ ರೀತಿ ೧೮ ವರ್ಷದ ಒಳಗಿನ ಮಕ್ಕಳು ಮೊಟಾರ್ ವಾಹನಗಳನ್ನು ಚಲಾವಣೆ ಮಾಡುವುದು ಕಾನೂನು ಅಡಿಯಲ್ಲಿ ಅಪಾರಾಧ ಅಷ್ಟೇ ಅಲ್ಲದೆ ಮಕ್ಕಳಿಗೆ ಮೊಟರ್ ವಾಹನಗಳನ್ನು ಕೊಡುವುದರಿಂದ ಪಾಲಕರಿಗೆ ಕಾನೂನು ಅಡಿಯಲ್ಲಿ ಶಿಕ್ಷೆ ಇರುತ್ತದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣೆ ಇಲಾಖೆಯ ಉಪ ನಿರ್ದೇಶಕರು ಪ್ರಭಾರಿ ವೀಣಾ, ಇವರು ಪ್ರಾಸ್ತಾವಿಕ ನುಡಿಗಳನ್ನು ಪ್ರಸ್ತಾಪಿಸಿದರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಧುಮಾಲತಿ ಪಡುವಣೆ ರವರು ವಿದ್ಯೆಯ ಮಹತ್ವವನ್ನು ತಿಳಿಸುತ್ತಾ ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜು.ವಿವಿ ಪ್ರಾಂಶುಪಾಲರು ಎಂ.ಜೆ.ಜಿ.ಸಿ ಕೋಲಾರ, ಭಾರತಿ ಎಂ. ಉಪ ಪ್ರಾಂಶುಪಾಲರು ನೂತನ ಸರ್ಕಾರಿ ಪ್ರೌಢಶಾಲೆ ಕೋಲಾರ ವಿಭಾಗದ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್