ಕೋಲಾರ, ೧೯ ಜುಲೈ (ಹಿ.ಸ.) :
ಆ್ಯಂಕರ್ : ತಾಲ್ಲೂಕಿನ ವೇಮಗಲ್ ಹೋಬಳಿಯ ಬೆಟ್ಟಹೊಸಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶನಿವಾರ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ, ಪರಿಶೀಲಿಸಿದರು.
ಅಂಗನವಾಡಿ ಕೇಂದ್ರದಲ್ಲಿ ನೀರಿದೆ ಆದರೆ ಟ್ಯಾಂಕ್ ಇಲ್ಲದೇ ಸಮಸ್ಯೆ ಆಗಿದೆ ಅಳವಡಿಸಿ ಪೈಫ್ ಲೈನ್ ಹಾಕಿಸಿಕೊಟ್ಟರೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದಕ್ಕೆ ಕೂಡಲೇ ಹಾಕಿಸಿಕೊಡತ್ತೇನೆ
ಮಕ್ಕಳಿಗೆ ನೀಡುವ ಆಹಾರಧಾನ್ಯ ಹಾಗೂ ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ಪರಿಶೀಲನೆ ಮಾಡಿ ಮಕ್ಕಳಿಗೆ ನೀಡುವ ಆಹಾರದಲ್ಲಿ ಎಲ್ಲ ಪೌಷ್ಟಿಕಾಂಶ ಇರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದ ಆಹಾರ ಧಾನ್ಯಗಳನ್ನು ಮಾತ್ರ ಬಳಸಬೇಕು. ಅಡುಗೆ ಮಾಡಲು ಬಳಸುವ ಪಾತ್ರೆ ಹಾಗೂ ಕೊಠಡಿಯನ್ನು ಸ್ವಚ್ಛವಾಗಿಟ್ಟುಕೊಂಡು, ಅಡುಗೆಗೆ ಶುದ್ಧ ನೀರನ್ನು ಬಳಸಬೇಕು ಎಂದು ಸೂಚಿಸಿದರು.
ಅಂಗನವಾಡಿಗಳ ಬಗ್ಗೆ ಯಾವುದೇ ದೂರು ಬಂದಲ್ಲಿ ಸಂಬಂಧಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವಂತೆ ಅಂಗನವಾಡಿ ಪರಿಸರವನ್ನು ಇಟ್ಟುಕೊಳ್ಳಬೇಕು. ಸರ್ಕಾರ ಒದಗಿಸುವ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವ್ಯವಸ್ಥಿತವಾಗಿ ಮಕ್ಕಳಿಗೆ ನೀಡಬೇಕು. ಯಾವುದೇ ಮಗು ಅಪೌಷ್ಟಿಕತೆಯಿಂದ ಬಳಲುವಂತೆ ಆಗಬಾರದು. ಮಗುವಿನ ಬೆಳವಣಿಗೆ ಹಾಗೂ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೋಮುಲ್ ನಿರ್ದೇಶಕರಾದ ಚಂಜಿಮಲೆ ರಮೇಶ್, ಷಂಷೀರ್, ಕಾಂಗ್ರೆಸ್ ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಬೆಟ್ಟಹೊಸಪುರ ಜಗನ್, ಮುಂತಾದವರು ಇದ್ದರು.
ಚಿತ್ರ - ಕೋಲಾರ ತಾಲ್ಲೂಕಿನ ಬೆಟ್ಟಹೊಸಪುರ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಬೇಟಿ ನೀಡಿ ಪರಿಶೀಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್