ಗದಗ, 02 ಜುಲೈ (ಹಿ.ಸ.) :
ಆ್ಯಂಕರ್ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯವು ಪ್ರಸಕ್ತ 2025-26 ನೇ ಜುಲೈ ಆವೃತ್ತಿಯ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಯ ಪ್ರಕ್ರಿಯೆ ಆರಂಭಿಸಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ ಎಂ.ಎ , ಎಂ.ಎ- ಪತ್ರಿಕೋದ್ಯಮ , ಎಂ.ಕಾA, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್. ಡಬ್ಲೂ ಹಾಗೂ ಡಿಪ್ಲೋಮಾ ಮತ್ತು ಪಿ.ಜಿ.-ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ.
ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಅಧಿಕೃತ ವೆಬ್‌ಸೈಟ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿ ಮಾಡಿಸಿಕೊಂಡ ನಂತರ ಆನ್ ಲೈನ್ ಮುಖಾಂತರ ಪ್ರವೇಶಾತಿಯ ಶುಲ್ಕ ಪಾವತಿಸಿ ಪ್ರವೇಶಾತಿಯನ್ನು ಪಡೆಯಲು ಗದಗ ಪ್ರಾದೇಶಿಕ ನಿರ್ದೇಶಕರಾದ ಸಿದ್ಧಾರ್ಥ ಬಿ.ಎನ್. ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಗದಗ ಪ್ರಾದೇಶಿಕ ಕೇಂದ್ರ, ಎಲ್.ಎಲ್. ಕಟ್ಟಡ, ಡಾ.ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೇ ಹತ್ತಿರ, ಜನರಲ್ ಕೆ.ಎಂ.ಕಾರ್ಯಪ್ಪ ವೃತ್ತ (ಹಳೆಯ ಡಿ.ಸಿ. ಕಚೇರಿ ವೃತ್ತ )ಗದಗ–582101 ಹಾಗೂ ಕಚೇರಿ ದೂರವಾಣಿ ಸಂಖ್ಯೆ 8884231002/8970555801/8549856177/ 9008459778/ 7259962717/7338103445 ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP