ಗದಗ, 02 ಜುಲೈ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 50 ವರ್ಷ ಮೇಲ್ಪಟ್ಟ ಕಷ್ಟ ಪರಿಸ್ಥಿತಿಯಲ್ಲಿರುವ ಮಾಜಿ ಕುಸ್ತಿಪಟುಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನವನ್ನು ಮಂಜೂರು ಮಾಡುವ ಸಲುವಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣ ಗದಗ ಇವರ ಕಾರ್ಯಾಲಯದಲ್ಲಿ ಅರ್ಜಿ ಪಡೆದುಕೊಂಡು ಮೂಲ ದಾಖಲಾತಿಗಳೊಂದಿಗೆ ಜುಲೈ 16 ರಂದು ಸಂಜೆ 5.30 ಗಂಟೆಯೊಳಗೆ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP