ಬೆಂಗಳೂರು, 02 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ 14ನೇ ವಿಶೇಷ ಸಚಿವ ಸಂಪುಟ ಸಭೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ಭಾಗವಹಿಸುತ್ತಿದ್ದು, ಸಭೆಗೂ ಮುನ್ನ ಭೋಗನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಕೆಎಸ್‌ಟಿಡಿಸಿ ಮಯೂರ ಸಭಾಂಗಣವನ್ನು ಸಭೆಗೆ ಅನುಗುಣವಾಗಿ ನವೀಕರಿಸಲಾಗಿದೆ. ಭದ್ರತೆಗೆ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಭೆಯಲ್ಲಿ ಬಯಲುಸೀಮೆ ಜಿಲ್ಲೆಗಳಿಗೆ ಅನೇಕ ಅಭಿವೃದ್ಧಿ ಯೋಜನೆಗಳ ಘೋಷಣೆ ನಿರೀಕ್ಷೆಯಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa