ಮೈಸೂರು, 20 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪಾವತಿ ವಹಿವಾಟಿನ ಹಿನ್ನೆಲೆಯಲ್ಲಿ ತೆರಿಗೆ ಇಲಾಖೆ ನೋಟೀಸ್ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಎಸ್ ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್ ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa