ಅಹಮದಾಬಾದನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ
ಅಹಮದಾಬಾದ್, 20 ಜುಲೈ (ಹಿ.ಸ.) : ಆ್ಯಂಕರ್ : ಒಂದೇ ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಅಹಮದಾಬಾದ್‌ನಲ್ಲಿ ನಡೆದಿದೆ. ಅಹಮದಾಬಾದ್ ಜಿಲ್ಲೆಯ ಬಗೋದರ ಗ್ರಾಮದಲ್ಲಿ ಕುಟುಂಬವೊಂದು ವಿಷಕಾರಿ ದ್ರವ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ರಿಕ್ಷಾ ಚಾಲಕರಾಗಿ ಕೆಲ
ಅಹಮದಾಬಾದನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ


ಅಹಮದಾಬಾದ್, 20 ಜುಲೈ (ಹಿ.ಸ.) :

ಆ್ಯಂಕರ್ : ಒಂದೇ ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಅಹಮದಾಬಾದ್‌ನಲ್ಲಿ ನಡೆದಿದೆ.

ಅಹಮದಾಬಾದ್ ಜಿಲ್ಲೆಯ ಬಗೋದರ ಗ್ರಾಮದಲ್ಲಿ ಕುಟುಂಬವೊಂದು ವಿಷಕಾರಿ ದ್ರವ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದ ವಿಪುಲ್ ಕಾಂಜಿ ವಾಘಲಾ (34), ಅವರ ಪತ್ನಿ ಸೋನಾಲ್ (26), ಅವರ 11 ಮತ್ತು 5 ವರ್ಷದ ಹೆಣ್ಣುಮಕ್ಕಳು ಮತ್ತು ಅವರ 8 ವರ್ಷದ ಮಗ ಎಂದು ಗುರುತಿಸಲಾಗಿದೆ.

ಮಾಹಿತಿ ತಿಳಿದು ಪೊಲೀಸರು ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ತಂಡಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಅಹಮದಾಬಾದ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande