ರಾಯಚೂರು, 20 ಜುಲೈ (ಹಿ.ಸ.) :
ಆ್ಯಂಕರ್ : ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಹುದ್ದೆಗಳನ್ನು ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ 11 ತಿಂಗಳ ಅವಧಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ 67 ಶುಶ್ರೂಷಕ ಅಧಿಕಾರಿಗಳ ಹುದ್ದೆಗಳಿಗೆ ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. (ಬಿ.ಎಸ್.ಸಿ ನರ್ಸಿಂಗ್ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಡಿಪ್ಲೊಮಾ ಇನ್ ನರ್ಸಿಂಗ್ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು). ಸಾಮಾನ್ಯ ಅಭ್ಯರ್ಥಿಗಳಿಗೆ 40 ವರ್ಷ ಹಾಗೂ ಪ.ಜಾತಿ / ಪ.ಪಂಗಡ / ಪ್ರವರ್ಗ -1ರ ಅಭ್ಯರ್ಥಿಗಳಿಗೆ 45 ವರ್ಷ ಮತ್ತು 2ಎ / 2ಬಿ / 3ಎ / 3ಬಿಗೆ 43 ವರ್ಷ ವಯೋಮಿತಿ ನಿಗದಿಪಡಿಲಾಗಿದೆ.
ಮೀಸಲಾತಿ ಕೋರುವ ಅಭ್ಯರ್ಥಿಗಳು ಅಗತ್ಯ ಜಾತಿ ಪ್ರಮಾಣ ಪತ್ರ ಲಗತ್ತಿಸುವುದು. ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಟ ವೇತನವನ್ನು ನೀಡಲಾಗುವುದು. ಸಿಟಿ ಸ್ಕ್ಯಾನ್ ಮತ್ತು ಎಂ.ಆರ್.ಐ ತಂತ್ರಜ್ಞರ 04 ಹುದ್ದಗಳಿಗೆ ಬಿ.ಎಸ್.ಸಿ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನೋಲೋಜಿ ವಿದ್ಯಾರ್ಹತೆ ಹೊಂದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 45 ವರ್ಷವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಕೋರುವ ಅಭ್ಯರ್ಥಿಗಳು ಅಗತ್ಯ ಜಾತಿ ಪ್ರಮಾಣ ಪತ್ರ ಲಗತ್ತಿಸುವುದು. 27,500 ರೂ.ಗಳ ವೇತನ ನೀಡಲಾಗುವುದು.
ಅಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಂಸ್ಥೆಯ ಅಂತರ್ಜಾಲ ವಿಳಾಸ: www.rimsraichur.karnataka.gov.in ದಿಂದ ಪಡೆದು ಜುಲೈ 21 ರಿಂದ ಆಗಸ್ಟ್ 04ರ ಸಂಜೆ 4 ಗಂಟೆಯೊಳಗಾಗಿ ಸ್ವ-ವಿವರ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಇತ್ತೀಚಿನ ಭಾವಚಿತ್ರ ಲಗತ್ತಿಸಿ ಈ ಕಚೇರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ನಿರ್ದೇಶಕರ ಕಚೇರಿ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹೈದ್ರಾಬಾದ್ ರಸ್ತೆ, ರಾಯಚೂರು-584102 ಇಲ್ಲಿಗೆ ತಲುಪಿಸಬಹುದಾಗಿದೆ.
ನೇಮಕಾತಿ ವಿಧಾನವು ಮೆರಿಟ್ ಮತ್ತು ಮೀಸಲಾತಿ ಹಾಗೂ ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುವುದು ಎಂದು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್