2ನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಅವಕಾಶ
ಬಳ್ಳಾರಿ, 22 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ
2ನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಅವಕಾಶ


ಬಳ್ಳಾರಿ, 22 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಆಯ್ಕೆಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ನಗರ ಸಭೆ ಕಚೇರಿ, ಪಟ್ಟಣ ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 08 ರಂದು ಸಂಜೆ 5.30 ರೊಳಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande