ಜು. 27-28ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ
ನವದೆಹಲಿ, 25 ಜುಲೈ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಜುಲೈ 27-28ರಂದು ತಮಿಳುನಾಡಿಗೆ ಭೇಟಿ ನೀಡಿ ಪ್ರಮುಖ ಸಾಂಸ್ಕೃತಿಕ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 27 ರಂದು ಅವರು ಅರಿಯಲೂರು ಜಿಲ್ಲೆಯ ಗಂಗೈಕೊಂಡ ಚೋಳಪುರಂನಲ್ಲಿ ನಡೆಯುವ ರಾಜೇಂದ್ರ ಚೋಳ I ರ 1000ನೇ
Pm


ನವದೆಹಲಿ, 25 ಜುಲೈ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಜುಲೈ 27-28ರಂದು ತಮಿಳುನಾಡಿಗೆ ಭೇಟಿ ನೀಡಿ ಪ್ರಮುಖ ಸಾಂಸ್ಕೃತಿಕ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜುಲೈ 27 ರಂದು ಅವರು ಅರಿಯಲೂರು ಜಿಲ್ಲೆಯ ಗಂಗೈಕೊಂಡ ಚೋಳಪುರಂನಲ್ಲಿ ನಡೆಯುವ ರಾಜೇಂದ್ರ ಚೋಳ I ರ 1000ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಪುರಾತತ್ವ ಛಾಯಾಚಿತ್ರ ಪ್ರದರ್ಶನ ಹಾಗೂ ಚೋಳ ಯುಗದ ಶಿಲ್ಪ ಪ್ರದರ್ಶನಗಳು ಆಯೋಜನೆಗೊಂಡಿವೆ.

ಜುಲೈ 28 ರಂದು, ಅವರು 381 ಕೋಟಿ ರೂ ವೆಚ್ಚದಲ್ಲಿ ನವೀಕರಿಸಿದ ಟುಟಿಕೋರಿನ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ರನ್ ವೇಯನ್ನು 3,000 ಮೀಟರ್‌ವರೆಗೆ ವಿಸ್ತರಿಸಲಾಗಿದ್ದು, ಇದು ಪ್ರದೇಶದ ಸಂಪರ್ಕ ಹಾಗೂ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande