ಚಿಕ್ಕಮಗಳೂರು, 26 ಜುಲೈ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.
ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ
ಮಳೆಯಿಂದಾಗಿ ತುಂಗಾ, ಭದ್ರಾ, ಹೇಮಾವತಿ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದು ಕೆಲವೆಡೆ ಭಾರಿ ಗಾತ್ರದ ಮರಗಳು ನೆಲಕ್ಕುರುಳಿ ಜನಜೀವನ ಅಸ್ತವ್ಯಸ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa