ಚೇತರಿಕೆ ಕಾಣದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಕ್ರಮ ವಹಿಸಿ : ಎನ್ಎಸ್ ಬೋಸರಾಜು
ರಾಯಚೂರು, 26 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ವಿಷ ಮಿಶ್ರಿತ ಆಹಾರ ಸೇವನೆಯಿಂದ ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅ
ಚೇತರಿಕೆ ಕಾಣದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಕ್ರಮ ವಹಿಸಿ : ಎನ್ಎಸ್ ಬೋಸರಾಜು


ಚೇತರಿಕೆ ಕಾಣದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಕ್ರಮ ವಹಿಸಿ : ಎನ್ಎಸ್ ಬೋಸರಾಜು


ರಾಯಚೂರು, 26 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ವಿಷ ಮಿಶ್ರಿತ ಆಹಾರ ಸೇವನೆಯಿಂದ ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭೇಟಿ ನೀಡಿ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದಾರೆ.

ವೈದ್ಯಾಧಿಕಾರಿಗಳೊಂದಿಗೆ ಮಾಹಿತಿ ಪಡೆದು, ಇಲ್ಲಿನ ಚಿಕಿತ್ಸೆಗೆ ಆರೋಗ್ಯ ಮಟ್ಟ ಚೇತರಿಕೆಯಿಂದ ಪ್ರತಿಕ್ರಿಯಿಸದಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ‌ ಮುನ್ನೆಚ್ಚರಿಕಾ ಕ್ರಮ ವಹಿಸಬೇಕೆಂದು ಸೂಚಿಸಿದರು. ಅರಾಮವಾಗುತ್ತಿದ್ದೀರಿ ಏನು ತೊಂದರೆಯಿಲ್ಲ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಧೈರ್ಯ ತುಂಬಿದರು.

ಇದೆ ಪ್ರಕರಣದಲ್ಲಿ ರಮೇಶ ನಾಯಕ (38), ಇವರ ಪುತ್ರಿಯರಾದ ನಾಗಮ್ಮ (8), ದೀಪಾ (6) ಮೃತಪಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂವಕ್ಕೆ ದುಃಖ ಭರಿಸುವ ಶಕ್ತಿ‌ನೀಡಲಿ ಎಂದು ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಜಯವಂತರಾವ್ ಪತಂಗೆ, ಹರಿಬಾಬು ಸೇರಿದಂತೆ ರಿಮ್ಸ್ ಆಡಳಿತ ಮಂಡಳಿ, ವೈದ್ಯರು ಹಾಗೂ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande