ಬೆಂಗಳೂರು, 27 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ರಸಗೊಬ್ಬರ ಕಳ್ಳದಂಧೆ ನಡೆಯುತ್ತಿದೆ, ನಕಲಿ ಬೀಜಗಳ ಸಮಸ್ಯೆ ಇರುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ದಾಸ್ತಾನು ಅನುದಾನವನ್ನು ಈ ಸರ್ಕಾರ 1000 ಕೋಟಿ ರೂ.ರಿಂದ 400 ಕೋಟಿಗೆ ಕಡಿತ ಮಾಡಿದೆ. ರೈತರಿಗಾಗಿ ಕೇಂದ್ರದಿಂದ ಬಂದ 8 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಎಲ್ಲಿ ಹೋಯಿತು ಎಂಬ ಪ್ರಶ್ನೆ ಎದುರಾಗಿದೆ” ಎಂದಿದ್ದು, ಈ ಕುರಿತು ನಾಳೆ ರಾಜ್ಯವ್ಯಾಪ್ತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa