ದಾವಣಗೆರೆ, 27 ಜುಲೈ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲೆ ಛಲವಾದಿ ಮಹಾಸಭಾದಿಂದ ಬಾಪೂಜಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಗೃಹ ಸಚಿವ ಜಿ. ಪರಮೇಶ್ವರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಭಗವಾನ್ ಬುದ್ಧ, ಬಸವೇಶ್ವರ, ಡಾ. ಅಂಬೇಡ್ಕರ್ ಹಾಗೂ ಒನಕೆ ಓಬವ್ವ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮೂಲಕ ನಮನ ಸಲ್ಲಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು. ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಎಸ್.ಎಸ್. ಮಲ್ಲಿಕಾರ್ಜುನ, ಶಾಸಕರಾದ ಬಿ. ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಕೆಪಿಸಿಸಿ ಕಾರ್ಯದರ್ಶಿ ವಿಜಯಕುಮಾರ್ ಹಾಗೂ ಮಹಾಸಭಾದ ಅಧ್ಯಕ್ಷ ಎನ್. ರುದ್ರಮುನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa