ನಾಳೆಯಿಂದ ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆ, 27 ಜುಲೈ (ಹಿ.ಸ.) : ಆ್ಯಂಕರ್ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 28 ಮತ್ತು 29 ರಂದು ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರ
ನಾಳೆಯಿಂದ ಆಧುನಿಕ ಹೈನುಗಾರಿಕೆ ತರಬೇತಿ


ದಾವಣಗೆರೆ, 27 ಜುಲೈ (ಹಿ.ಸ.) :

ಆ್ಯಂಕರ್ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 28 ಮತ್ತು 29 ರಂದು ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ ಎಂದು ದಾವಣಗೆರೆ ಜಿಲ್ಲಾ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande