ಬಿಬಿಎ ಕೋರ್ಸ್‍ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನ
ಹೊಸಪೇಟೆ, 28 ಜುಲೈ (ಹಿ.ಸ.) : ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಮೈಸೂರಿನಲ್ಲಿ ಪ್ರಥಮ ಬ್ಯಾಚುಲರ್ ವಿಜ್ಯುಯಲ್ ಆಟ್ರ್ಸ್ (ಬಿಬಿಎ) ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಪ್ರಾವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್
ಬಿಬಿಎ ಕೋರ್ಸ್‍ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನ


ಹೊಸಪೇಟೆ, 28 ಜುಲೈ (ಹಿ.ಸ.) :

ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಮೈಸೂರಿನಲ್ಲಿ ಪ್ರಥಮ ಬ್ಯಾಚುಲರ್ ವಿಜ್ಯುಯಲ್ ಆಟ್ರ್ಸ್ (ಬಿಬಿಎ) ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಪ್ರಾವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಮೈಸೂರಿನ ಡೀನ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಗೆ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್(ಬಿಬಿಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎಸ್‍ಇಪಿ ಪದ್ದತಿ) ಬಾಕಿ ಉಳಿದ ಸೀಟುಗಳಿಗೆ ಜುಲೈ.30 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ(ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಲಯದ ಸಹಾಯವಾಣಿ ಸಂಖ್ಯೆ 0821-2438931 ನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಹಾಗೆಯೇ ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ https://uucms.karnataka.gov.in ಅಥವಾ https://www.cavamysore.karnataka.gov.in ದಲ್ಲಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande