ನವದೆಹಲಿ, 28 ಜುಲೈ (ಹಿ.ಸ.) :
ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ವಿರುದ್ಧವಾಗಿ ಸಂಸತ್ ಭವನದ ಆವರಣದಲ್ಲಿ ಕಾಂಗ್ರೆಸ್ ಸೇರಿದಂತೆ ಹಲವಾರು ಪ್ರತಿ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಪ್ರಿಯಾಂಕಾ ಗಾಂಧಿ, ಮತ್ತು ಇತರ ಪ್ರಮುಖ ನಾಯಕರು ಭಾಗವಹಿಸಿದರು.
ಸಂಸದರು ಎಸ್ಐಆರ್ ಪ್ರಜಾಪ್ರಭುತ್ವಕ್ಕೆ ಅಪಾಯ, ಎಸ್ಐಆರ್ ನಿಲ್ಲಿಸಿ ಎಂಬ ಘೋಷಣೆಗಳನ್ನು ಹಾಕಿದ ಬ್ಯಾನರ್‌ಗಳನ್ನು ಹಿಡಿದು, ಎಸ್‌ಐಆರ್ ಅನ್ನು ಹಿಂಪಡೆಯಲು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa