ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ
ಬೆಂಗಳೂರು, 28 ಜುಲೈ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಉದ್ದೇಶಿತ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಗಳಿಗೆ ದ್ರೋಹ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.
Ashok


ಬೆಂಗಳೂರು, 28 ಜುಲೈ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಉದ್ದೇಶಿತ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಗಳಿಗೆ ದ್ರೋಹ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಸದ್ಯದ ಬಜೆಟ್‌ನಲ್ಲಿ ಪರಿಶಿಷ್ಟ ಸಮುದಾಯಗಳಿಗಾಗಿ ಒದಗಿಸಿರುವ ₹42,017.51 ಕೋಟಿ ಅನುದಾನದಲ್ಲಿ ₹11,896.84 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಸರ್ಕಾರ ಮುಂದಾಗಿದೆ. ಇದು ದಲಿತರ ಹಕ್ಕು ಹರಣವಾಗಿದೆ,” ಎಂದು ಆರೋಪಿಸಿದ್ದಾರೆ.

“ಸಿದ್ದರಾಮಯ್ಯನವರೇ, ಬಜೆಟ್‌ನಲ್ಲಿ ಘೋಷಣೆ ಮಾಡುವುದು ಒಂದೆಡೆ. ಆದರೆ ನಿಜವಾದ ಬದ್ಧತೆ ಇದ್ದರೆ ಪರಿಶಿಷ್ಟ ಸಮುದಾಯಗಳಿಗೆ ನೇರ ಲಾಭವಾಗುವ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡಬೇಕು. ಭಾಷಣಗಳಿಂದ ಸಮಾಜ ರೂಪಾಂತರವಾಗುವುದಿಲ್ಲ,” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande