ವೇಮಗಲ್ನಲ್ಲಿ ಹದಿನೆಂಟು ಕೋಟಿಗಳ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ವೇಮಗಲ್ನಲ್ಲಿ ಹದಿನೆಂಟು ಕೋಟಿಗಳ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಚಿತ್ರ : ಕೋಲಾರ ತಾಲ್ಲೂಕಿನ ವೇಮಗಲ್ನಲ್ಲಿ ಹದಿನೆಂಟು ಕೋಟಿಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶಾಸಕ ಕೊತ್ತೂರು ಜಿ.ಮಂಜುನಾಥ್ ಚಾಲನೆ ನೀಡಿದರು.


ಕೋಲಾರ, ೨೮ ಜುಲೈ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಭಾಗದ ಜನತೆ ಸುಗಮವಾಗಿ ಸಂಚರಿಸಲು ಅನುಕೂಲವಾಗಲು ರಸ್ತೆಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ವೇಮಗಲ್ನಲ್ಲಿ ಸುಮಾರು ೧೮ ಕೋಟಿ ರೂಪಾಯಿ ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಬಾಕಿ ಇರುವ ರಸ್ತೆಗಳ ಅಭಿವೃದ್ಧಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿಗೂ ಮನ್ನಣೆ ನೀಡಿದ್ದು, ಕ್ಷೇತ್ರದ ೩೨ ಹಳ್ಳಿಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಹಾಗೂ ಹೈಮಾಸ್ಕ್ ಲೈಟ್ ಗಳನ್ನು ಅಳವಡಿಸಲಾಗಿದೆ ಎಂದರು.

ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ೧೦ ಎಕರೆ ಜಾಗದಲ್ಲಿ ಕಸ ವಿಲೇವಾರಿ ಘಟಕ ಹಾಗೂ ಎಸ್ ಟಿ ಪಿ ಪ್ಲಾಂಟ್ ನ್ನು ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣ ಪಂಚಾಯಿತಿ ಅಭಿವೃದ್ಧಿಗೆ ಒತ್ತು ನೀಡಿದ್ದು, ಪಟ್ಟಣ ಪಂಚಾಯಿತಿ ಯೋಜನಾ ಪ್ರಾಧಿಕಾರಕ್ಕೆ ಉತ್ತಮ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಿ, ಸರ್ಕಾರಕ್ಕೆ ಕಳುಹಿಸಲಾಗಿದೆ.ರಸ್ತೆಗಳು, ಚರಂಡಿಗಳ ಅಭಿವೃದ್ಧಿಗೆ ಟೆಂಡರ್ ಕರೆದು ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಮಡಿವಾಳದಿಂದ ಸುಳದೇನಹಳ್ಳಿವರೆಗೆ ೩ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ, ಅಭಿವೃದ್ಧಿ, ಒಳಚರಂಡಿ ಅಭಿವೃದ್ದಿ, ಕಾಂಕ್ರೀಟ್ ರಸ್ತೆ ಅಭಿವೃದ್ಧಿ, ೧ ಕೋಟಿ ೪೦ಲಕ್ಷ ರೂಪಾಯಿ ವೆಚ್ಚದಲ್ಲಿ ಕ್ಯಾಲನೂರು ಕಂಕ್ಷನ್ ಅಭಿವೃದ್ಧಿ, ಕುರುಗಲ್ ಗ್ರಾಮದಲ್ಲಿ ೧೫ ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ, ಡಾಂಬರು ರಸ್ತೆ ಅಭಿವೃದ್ಧಿ, ೧ಕೋಟಿ ೫೦ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಲೇರಳ್ಳಿಯಿಂದ ಪೇರ್ಜೇನಹಳ್ಳಿವರೆಗೆ ಡಾಂಬರೀಕರಣ ರಸ್ತೆ ಅಭಿವೃದ್ಧಿ ಹಾಗೂ ೮ ಕೋಟಿ ರೂಪಾಯಿ ವೆಚ್ಚದಲ್ಲಿ ವೇಮಗಲ್ ನಿಂದ ಸೀತಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ, ೨ ಕೋಟಿ ೫೦ಲಕ್ಷ ರೂಪಾಯಿ ವೆಚ್ಚದಲ್ಲಿ ಚೌಡದೇನಹಳ್ಳಿಯಿಂದ ಕಲ್ವಮಂಜಲಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದರು.

ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ನಿಧಿಯಿಂದ ಎರಡು ಆಟೋ ಮತ್ತು ಪಿಟ್ ತೆಗೆಯುವ ಮೆಷಿನ್ ಗೆ ಶಾಸಕರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ವೇಮಗಲ್ನಲ್ಲಿ ಹದಿನೆಂಟು ಕೋಟಿಗಳ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶಾಸಕ ಕೊತ್ತೂರು ಜಿ.ಮಂಜುನಾಥ್ ಚಾಲನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande