ವಿಜಯಪುರ, 28 ಜುಲೈ (ಹಿ.ಸ.) :
ಆ್ಯಂಕರ್ : ಒಳ ಮೀಸಲಾತಿ ಜಾರಿಗೆ ಮಾಡಬೇಕು ಎಂದು ಜಿಲ್ಲಾ ಮಾದಿಗರ ಸಂಘಟನೆಯ ಒಕ್ಕೂಟ ಅಧ್ಯಕ್ಷ ಶ್ರೀಶೈಲ ರತ್ನಾಕರ ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಹಾಗೂ ಜೆ.ಸಿ. ಮಾಧುಸ್ವಾಮಿ ವರದಿ ಪರಿಗಣಿಸಿ ಪರಿಶಿಷ್ಟ ಒಳ ಮೀಸಲಾತಿಯನ್ನು ಆಗಷ್ಟ್ 15ರ ಒಳಗೆ ಸರ್ಕಾರ ಜಾರಿಗೆ ಮಾಡಬೇಕು. ಇಲ್ಲದೇ ಹೋದರೆ ಮುಂಬರುವ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸರ್ಕಾರಕ್ಕೆ ತಕ್ಕಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಅಲ್ಲದೇ, ಆಗಷ್ಟ್ 1ರಂದು ರಾಜ್ಯಾದ್ಯಂತ ಸಾಂಕೇತಿಕವಾಗಿ ಹೋರಾಟ ಮಾಡುತ್ತೇವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande