ಕೊಟ್ಟೂರು, 28 ಜುಲೈ (ಹಿ.ಸ.) :
ಆ್ಯಂಕರ್ : ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದ ಶ್ರೀಉಜ್ಜಿನಿ ಮರಳುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜು.29 ರಂದು, ಬೆಳಗ್ಗೆ 11 ಗಂಟೆಗೆ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ‘ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ’ವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ತಿಳಿಸಿದ್ದಾರೆ.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಆಯಾ ಇಲಾಖಾವಾರು ಅಹವಾಲು ಕೇಂದ್ರಗಳನ್ನು ಕೌಂಟರ್‌ಗಳ ಮೂಲಕ ತೆರೆಯಲಾಗಿರುತ್ತದೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಆಹವಾಲುಗಳಿದ್ದಲ್ಲಿ ಸಭೆಯಲ್ಲಿ ಸಲ್ಲಿಸಬಹುದು. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುವಂತೆ ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್