ಕೋಲಾರ, ೨೯ ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಸಚಿವ ದಿವಂಗತ ಸಿ.ಬೈರೇಗೌಡರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಂದಾಯ ಸಚಿವ ಸಿ.ಬಿ ಕೃಷ್ಣಬೈರೇಗೌಡ ಪ್ರತಿ ವರ್ಷದಂತೆ ಈ ವರ್ಷವೂ ಗರುಡಪಾಳ್ಯದ ನಿವಾಸದಲ್ಲಿ ಆಯೋಜಿಸಿದ್ದರು.
ಕೋಲಾರ ತಾಲ್ಲೂಕಿನ ನರಸಾಪುರ ಹೋಬಳಿಯ ಗರುಡಪಾಳ್ಯದಲ್ಲಿರುವ ದಿವಂಗತ ಸಿ.ಬೈರೇಗೌಡರ ಸಮಾಧಿಗೆ ವಿಶೇಷ ಅಲಂಕಾರ ಮಾಡಿದ್ದರು.
ಪತ್ನಿ ಸಾವಿತ್ರಮ್ಮ, ಮೀನಾಕ್ಷಿ ಕೃಷ್ಣಬೈರೇಗೌಡ, ಗೋಪಾಲಗೌಡ, ಚೌಡೇಗೌಡ, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು ಸೇರಿದಂತೆ ಹಲವಾರು ಗಣ್ಯರು ಮಾಲಾರ್ಪಣೆ ಹಾಕಿ ವಿಶೇಷ ಪೂಜೆಯೊಂದಿಗೆ ನಮನ ಸಲ್ಲಿಸಿದರು. ಸಹಸ್ರಾರು ಮಂದಿ ಪೂಜೆಯಲ್ಲಿ ಭಾಗಿಯಾಗಿದ್ದು, ಎಲ್ಲರಿಗೂ ವಿಶೇಷ ಸಿಹಿ ಭೋಜನ ವ್ಯವಸ್ಥೆ ಮಾಡಿದ್ದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್, ಬೈರೇಗೌಡರ ಪತ್ನಿ ಸಾವಿತ್ರಮ್ಮ ಸೊಸೆ ಮೀನಾಕ್ಷಿ ಕೃಷ್ಣಬೈರೇಗೌಡ, ಗೋಪಾಲಗೌಡ, ಚೌಡೇಗೌಡ, ಕೋಲಾರ ಶಾಸಕ ಕೊತ್ತೂರು ಜಿ ಮಂಜುನಾಥ್, ಮಾಲೂರು ಶಾಸಕ ನಂಜೇಗೌಡ, ಎಂಎಲ್ ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ, ನಾಗನಾಳ ಸೋಮಣ್ಣ, ಕೆ.ವಿ ಗೌತಮ್, ಕೋಮಲ್ ನಿರ್ದೇಶಕ ಚಂಜಿಮಲೆ ರಮೇಶ್, ಉರಟ ಅಗ್ರಹಾರ ಚೌಡರೆಡ್ಡಿ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಸೊಸೈಟಿ ಮಾಜಿ ಅಧ್ಯಕ್ಷ ಶೈಲಜಾ ಪಿ ವೆಂಕಟೇಶ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಕಲ್ವಮಂಜಲಿ ಚಂದ್ರೇಗೌಡ, ಮಾಜಿ ಗ್ರಾಪಂ ಅಧ್ಯಕ್ಷ ಕುರುಬರಹಳ್ಳಿ ಕುಮಾರ್, ನವೀನ್ ಕುಮಾರ್, ವಿನಯ್, ಪೇರ್ಜೆನಹಳ್ಳಿ ನಾಗೇಶ್, ಸೂಲೂರು ಪಾಟೀಲ್, ಬೆಟ್ಟಹೊಸಪುರ ಜಗನ್, ವೇಮಗಲ್ ದೀಪು, ಹಾಗೂ ಬೈರೇಗೌಡರ ಕುಟುಂಬಸ್ಥರು ಭಾಗಿಯಾಗಿದ್ದರು.
ಚಿತ್ರ : ಕೋಲಾರ ತಾಲ್ಲೂಕಿನ ನರಸಾಪುರ ಹೋಬಳಿಯ ಗರುಡಪಾಳ್ಯದಲ್ಲಿರುವ ದಿವಂಗತ ಸಿ.ಬೈರೇಗೌಡರ ಸಮಾಧಿಗೆ ನಮನ ಸಲ್ಲಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್