ಗದಗ, 03 ಜುಲೈ (ಹಿ.ಸ.) :
ಆ್ಯಂಕರ್ : ಹೊಸ ಬಸ್ ನಿಲ್ದಾಣದ ಸ್ವಚ್ಚತೆಗೆ ಅಧಿಕಾರಿಗಳು ಆದ್ಯತೆ ನೀಡಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉತ್ತಮ ವಾತವರಣ ಕಲ್ಪಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಬಿ ಬಿ ಅಸೂಟಿ ಹೇಳಿದರು.
ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಜುಲೈ 2 ರಿಂದ 4 ವರೆಗೆ ಪ್ರದರ್ಶಿಸುವ ಕರ್ನಾಟಕ ಸರ್ಕಾರದ 2ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ನಂತರ ಬಸ್ ನಿಲ್ದಾಣವನ್ನು ವಿಕ್ಷಣೆ ಮಾಡಿ ಅವರು ಮಾತನಾಡಿದರು
ನಿಲ್ದಾಣದಲ್ಲಿರುವ ಶೌಚಾಲಯಗಳನ್ನು ಗಮನಿಸಿದ ಅವರು ಶಕ್ತಿ ಯೋಜನೆಯಿಂದ ದಿನಕ್ಕೆ ಸಾವಿರಾರು ಮಹಿಳೆಯರು ಉಚಿತ ಪ್ರಯಾಣ ಮಾಡುವಂತಾಗಿದೆ ಹಾಗಾಗಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯಗಳು ಅದಕ್ಕೆ ಅಳವಡಿಸಿರುವ ನಳಗಳು ಸುಸಿತ್ಥಿಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರು ಕುಡುವ ಆಸನ ವ್ಯವಸ್ಥೆ ಹಾಳಾಗಿದ್ದು ಸಾರ್ವಜನಿಕರಿಗೆ ಕೂಡಲು ಸೂಕ್ತ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು,ಬಸ್ ನಿಲ್ದಾಣದ ಒಳಗಡೆ ಇರುವ ಅಂಗಡಿಗಳ ತ್ಯಾಜ್ಯ ವನ್ನು ಸರಿಯಾಗಿ ವಿಲೇವಾರಿ ಮಾಡುವಂತೆ ಕ್ರಮ ವಹಿಸಬೇಕು ಇಲ್ಲದಿದ್ದಲ್ಲಿ ಅಂಗಡಿಯವರಿಗೆ ನೋಟಿಸ್ ನೀಡಬೇಕು ಅಂದಾಗ ಮಾತ್ರ ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಕಡಿಮೆ ಆಗುತ್ತದೆ ಎಂದು ಹೇಳಿದರು.
ಈ ವೇಳೆ ಬಸ್ ನಿಲ್ದಾಣದಲ್ಲಿ ಕುಳಿತ ಮಹಿಳೆಯರೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಕುರಿತು ಅಭಿಪ್ರಾಯ ಕೇಳಿದರು ಇದಕ್ಕೆ ಪ್ರತಿಕ್ರಿಯೆಸಿದ ಮಹಿಳೆಯರು ಶಕ್ತಿ ಯೋಜನೆಯಿಂದ ಉಚಿತವಾಗಿ ಸ್ವಾವಲಂಬನೆ ಯೊಂದಿಗೆ ಬಸ್ ನಲ್ಲಿ ಓಡಾಡಲು ಅನೂಕುಲವಾಗಿದೆ ಎಂದು ಸಂತೋಷ ವ್ಯಕ್ತ ಪಡಿಸಿದರು.
ಶಕ್ತಿ ಯೋಜನೆಯಿಂದಾಗಿ ಪ್ರತಿ ದಿನ ಸಾವಿರಾರು ಮಹಿಳೆಯರು ಸ್ವಾವಲಂಬನೆ ಯಿಂದ ಓಡಾಟ ನಡೆಸುತ್ತಿದ್ದಾರೆ ಹಾಗಾಗಿ ಬಸ್ ನಿಲ್ದಾಣ ದಲ್ಲಿರುವ ಶೌಚಾಲಯಗಳು ಸುವ್ಯವಸ್ಥಿತ ವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಗಮನ ಹರಿಸಬೇಕು ಹಾಗು ಬಸ್ ನಿಲ್ದಾಣದಲ್ಲಿರುವ ಆಸನ ವ್ಯವಸ್ಥೆಯನ್ನು ಸರಿಯಾಗಿ ಮಾಡಬೇಕು ಹಾಗು ಪ್ಲಾಸ್ಟಿಕ್ ಮುಕ್ತ ಬಸ್ ನಿಲ್ದಾಣ ಮಾಡಬೇಕು ಎಂದು ಗದಗ ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸದಸ್ಯ ಕೃಷ್ಣಗೌಡ ಎಚ್ ಪಾಟೀಲ ಹೇಳಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕಬರ್ ಸಾಬ್ ಬಬರ್ಜಿ, ಗದಗ ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಅಶೋಕ ಮಂದಾಲಿ, ನೀಲಮ್ಮ ಬೋಳಣ್ಣನವರ, ಬಸವರಾಜ ಕಡೇಮನಿ, ಶಂಭು ಕಾಳೆ, ಸಂಗಮೇಶ ಕೆರಕಲಮಟ್ಟಿ, ಸಾವಿತ್ರಿ ಹೂಗಾರ, ದೇವರಡ್ಡಿ ತಿರ್ಲಾಪುರ, ಗಣೇಶ ಮಟ್ಟಾಲಿ, ಸಂಗಮೇಶ ಹಾದಿಮನಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಮಹಿಳಾ ಮತ್ತು ಮಕ್ಕಳ ನಿರೂಪಣಾಧಿಕಾರಿ ರಾಧಾ ಮಣ್ಣೂರು, ಹುಲಿಗೆಮ್ಮ ಜೋಗೆರ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Lalita MP