ಹರಿದ್ವಾರ, 03 ಜುಲೈ (ಹಿ.ಸ.) :
ಆ್ಯಂಕರ್ : ಹವಾಮಾನ ವೈಪರೀತ್ಯ ಹಾಗೂ ಸುರಕ್ಷತಾ ಕಾರಣಗಳಿಂದಾಗಿ ಚಾರ್ ಧಾಮ್ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
ಯಾತ್ರೆಯ ಸಮಯದಲ್ಲಿ ನಮ್ಮ ಆದ್ಯತೆಯು ಎಲ್ಲ ಯಾತ್ರಿಕರ ಸುರಕ್ಷತೆಯಾಗಿದ್ದು, ಹವಾಮಾನ ಸ್ಥಿತಿಗತಿಯು ಸುಧಾರಿಸಿದ ನಂತರ ಯಾತ್ರೆ ಪುನರಾರಂಭವಾಗುತ್ತದೆ.
ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಸಮಸ್ಯೆ ಪರಿಹಾರಕ್ಕೆ ಎಲ್ಲಾ ಜಿಲ್ಲಾಧಿಕಾರಿಗಳು, ಎನ್ ಡಿಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ತಂಡಗಳು ಸಂಪೂರ್ಣ ಸಿದ್ಧವಾಗಿವೆ ಎಂದು ಮುಖ್ಯಮಂತ್ರಿ ಧಾಮಿ ಹೇಳಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa