ಧಾರವಾಡ ಎಎಸ್‌ಪಿ ಭರಮನಿ ಮನವೊಲಿಸಿದ ಮುಖ್ಯಮಂತ್ರಿ
ಧಾರವಾಡ, 03 ಜುಲೈ (ಹಿ.ಸ.) : ಆ್ಯಂಕರ್ : ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎನ್.ವಿ. ಭರಮನಿ ಅವರು ಇಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುವ ಮಾತಿನ ಬಳಿಕ ಅವರು ಈ ನಿರ್ಧಾರ ತೆಗೆ
Asp


ಧಾರವಾಡ, 03 ಜುಲೈ (ಹಿ.ಸ.) :

ಆ್ಯಂಕರ್ : ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎನ್.ವಿ. ಭರಮನಿ ಅವರು ಇಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುವ ಮಾತಿನ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಭರಮನಿ ಅವರು ಇಂದು ಧಾರವಾಡ ಪೋಲಿಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್ ಅವರೊಂದಿಗೆ ಚರ್ಚೆ ನಡೆಸಿ, ಕರ್ತವ್ಯ ನಿರ್ವಹಣೆ ಪ್ರಾರಂಭಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಅವರು, “ನನ್ನ ಭಾವನೆಗಳನ್ನು ಹಿರಿಯರಿಗೆ ತಿಳಿಸಿದ್ದೆ. ಅವರು ನನ್ನೊಂದಿಗೆ ಮಾತನಾಡಿದ್ದಾರೆ. ನಾನು ಶಿಸ್ತಿನ ಇಲಾಖೆಯಲ್ಲಿ ಇದ್ದೇನೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ನನ್ನೊಂದಿಗೆ ಮಾತುಕತೆ ನಡೆಸಿದ್ದಾರೆ. ನಾನು ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ,” ಎಂದು ತಿಳಿಸಿದ್ದಾರೆ.

ಏಪ್ರಿಲ್ 28 ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ವೇಳೆ ಭದ್ರತಾ ವ್ಯವಸ್ಥೆ ಕುರಿತು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯಲ್ಲಿ ಭರಮನಿ ವಿರುದ್ಧ ಕೈ ಎತ್ತಿ ರೇಗಿದ ಘಟನೆ ನಡೆದಿತ್ತು. ಇದರಿಂದ ಮಾನಸಿಕ‌ವಾಗಿ ಕುಗ್ಗಿದ್ದ ಭರಮನಿ ಅವರು, ಮೇ ತಿಂಗಳಲ್ಲಿ ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು.

ಈ ಘಟನೆಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ, “ಅದು ಉದ್ದೇಶಪೂರ್ವಕವಾಗಿರಲಿಲ್ಲ. ನಿಮ್ಮನ್ನು ಅಪಮಾನಿಸುವ ಉದ್ದೇಶವೂ ಇಲ್ಲ,” ಎಂದು ಭರಮನಿಗೆ ದೂರವಾಣಿ ಮೂಲಕ ಸಮಾಧಾನಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande