ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, 03 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗಿದ್ದು, 8 ಜಿಲ್ಲೆಗಳಿಗೆ ಶನಿವಾರದವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿ
Alert


ಬೆಂಗಳೂರು, 03 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗಿದ್ದು, 8 ಜಿಲ್ಲೆಗಳಿಗೆ ಶನಿವಾರದವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.

ಧಾರವಾಡ, ಗದಗ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ಭಾರಿ ಮಳೆಯ ಹಿನ್ನೆಲೆ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande