ಶಿವಮೊಗ್ಗದಲ್ಲಿ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ
ಶಿವಮೊಗ್ಗ, 03 ಜುಲೈ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರು ಪರಿಣಾಮ ಮೂರು ತಾಲೂಕಿನ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ‌ ಘೋಷಿಸಲಾಗಿದೆ. ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮೂರು ತಾಲೂಕು ಆಡಳಿತಗಳು ಅಂಗನವಾಡಿ ಸೇರ
ಶಿವಮೊಗ್ಗದಲ್ಲಿ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ


ಶಿವಮೊಗ್ಗ, 03 ಜುಲೈ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರು ಪರಿಣಾಮ ಮೂರು ತಾಲೂಕಿನ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ‌ ಘೋಷಿಸಲಾಗಿದೆ.

ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮೂರು ತಾಲೂಕು ಆಡಳಿತಗಳು ಅಂಗನವಾಡಿ ಸೇರಿದಂತೆ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

ತಾಲೂಕಿನ ಭಾಗಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಳ್ಳಗಳನ್ನು ದಾಟಿಕೊಂಡು ದೂರದ ಊರುಗಳಿಂದ ಬಸ್​ನಲ್ಲಿ ಆಗಮಿಸುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬ ಕಾರಣಕ್ಕೆ ತಾಲೂಕು ಆಡಳಿತ ತಮ್ಮ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande