ಸುಬ್ರಮಣ್ಯ, 03 ಜುಲೈ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ತಾಲೂಕು ಹಾಗೂ ಕುಕ್ಕೆ ಸುಬ್ರಮಣ್ಯದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು ಸುಬ್ರಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಮಳೆ ಹಿನ್ನೆಲೆಯಲ್ಲಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಘಟ್ಟ ಪ್ರದೇಶ ಹಾಗೂ ಕುಕ್ಕೆ ಸುಬ್ರಮಣ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದ್ದು, ಸ್ನಾನ ಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ನದಿ ನೀರಿನ ಬಳಿಗೆ ಭಕ್ತರು ತೆರಳದಂತೆ ಸೂಚಿಸಲಾಗಿದ್ದು, ನದಿ ದಡದಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa