ನೀರಜ್ ಚೋಪ್ರಾ- ಸಿದ್ದರಾಮಯ್ಯ ಭೇಟಿ
ಬೆಂಗಳೂರು, 03 ಜುಲೈ (ಹಿ.ಸ.) : ಆ್ಯಂಕರ್ : ಅವಳಿ ಒಲಿಂಪಿಕ್ಸ್ ಪದಕ ವಿಜೇತ ಮತ್ತು ಜಾಗತಿಕ ನಂಬರ್ 1 ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಸೌಹಾರ್ದವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಶಾಸಕರಾದ ಗೋವ
Chopra


ಬೆಂಗಳೂರು, 03 ಜುಲೈ (ಹಿ.ಸ.) :

ಆ್ಯಂಕರ್ : ಅವಳಿ ಒಲಿಂಪಿಕ್ಸ್ ಪದಕ ವಿಜೇತ ಮತ್ತು ಜಾಗತಿಕ ನಂಬರ್ 1 ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಸೌಹಾರ್ದವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಶಾಸಕರಾದ ಗೋವಿಂದರಾಜು ಉಪಸ್ಥಿತರಿದ್ದರು.

ನೀರಜ್ ಚೋಪ್ರಾ ಜುಲೈ 5ರಂದು ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿಗಳು ಅವರಿಗೆ ಶುಭ ಹಾರೈಸಿ, ರಾಜ್ಯದ ಕ್ರೀಡಾಭಿವೃದ್ಧಿಗೆ ಕೊಡುಗೆ ನೀಡಲು ಪ್ರೋತ್ಸಾಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande