ವಿಜಯಪುರ, 03 ಜುಲೈ (ಹಿ.ಸ.) :
ಆ್ಯಂಕರ್ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ ಎಂದು ಪ್ರಾಚಾರ್ಯ ಡಾ. ಶೈಜು ಕೆ. ನಾಯರ ಹೇಳಿದರು.
ನಗರದ ಬಿ.ಎಲ್.ಡಿ. ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ ಬಳಿಕ ಅವರು ಮಾತನಾಡಿದರು.
ಶಾಲೆಗಳಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆಗಳನ್ನು ನಡೆಸುವುದರಿಂದ ಮಕ್ಕಳಲ್ಲಿ ದೇಶದಲ್ಲಿ ನಡೆಯುವ ಚುನಾವಣೆ ಪ್ರಕ್ರಿಯೆ, ಮತದಾನ, ಫಲಿತಾಂಶ ಬಗ್ಗೆ ಅರಿವು ಮೂಡುತ್ತದೆ. ಅಲ್ಲದೇ, ಚುನಾವಣೆಯಲ್ಲಿ ಆಯ್ಕೆಯಾದ ಪ್ರತಿನಿಧಿಗಳ ಕರ್ತವ್ಯ ಮತ್ತು ಜವಾಬ್ದಾರಿಯ ಬಗ್ಗೆ ಜಾಗೃತಿ ಮೂಡುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಕಾರ್ಯಸಂಯೋಜಕಿ ದೀಪಾ ಜಂಬೂರೆ, ಶಿಕ್ಷಕ ಅಶೋಕ ನವಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande