ಛತ್ತೀಸ್‌ಗಢದಲ್ಲಿ ಸನ್ಯಾಸಿನಿಯರ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ, 30 ಜುಲೈ (ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢದ ದುರ್ಗ್ ದಲ್ಲಿ ಕ್ಯಾಥೋಲಿಕ್ ಸನ್ಯಾಸಿನಿಯರಾದ ವಂದನಾ ಫ್ರಾನ್ಸಿಸ್ ಮತ್ತು ಪ್ರೀತಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ನಾಯಕರು ಇಂದು ಸಂಸತ್ತಿನ ಆವರಣದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪ್ರಿಯಾಂಕಾ ಗಾಂಧಿ ವಾ
Protest


ನವದೆಹಲಿ, 30 ಜುಲೈ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ದುರ್ಗ್ ದಲ್ಲಿ ಕ್ಯಾಥೋಲಿಕ್ ಸನ್ಯಾಸಿನಿಯರಾದ ವಂದನಾ ಫ್ರಾನ್ಸಿಸ್ ಮತ್ತು ಪ್ರೀತಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ನಾಯಕರು ಇಂದು ಸಂಸತ್ತಿನ ಆವರಣದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಹಿರಿಯ ನಾಯಕರು ಭಾಗವಹಿಸಿದ್ದರು.

ಪ್ರಿಯಾಂಕಾ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅವರು ಮಾಡದ ದುಷ್ಕೃತ್ಯಗಳಿಗಾಗಿ ಆರೋಪ ಹಾಕಲಾಗಿದೆ. ಪೊಲೀಸರು ಅವರನ್ನು ಥಳಿಸಿ ಬಂಧಿಸಿದ್ದಾರೆ. ಇದು ಅಲ್ಪಸಂಖ್ಯಾತರ ವಿರುದ್ಧ ನಡೆಯುವ ಸಂಘಟಿತ ದೌರ್ಜನ್ಯದ ಭಾಗವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರು ಬಿಜೆಪಿ ನೇತೃತ್ವದ ಸರ್ಕಾರವನ್ನು ಟೀಕಿಸುತ್ತಾ, ಇದು ರಾಜಕೀಯ ಪ್ರೇರಿತ ಬಂಧನವಾಗಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸಗಳನ್ನು ಬಿಜೆಪಿ ನಡೆಸುತ್ತಿದೆ. ಇದು ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ನಿಲುವಿನ ಭಾಗವಾಗಿದೆ ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande